Sunday, October 1, 2023

Latest Posts

ತಮಿಳುನಾಡಿಗೆ ಕಾವೇರಿ ನೀರು: CWMA ಆದೇಶ ಪಾಲಿಸಲು ಸಾಧ್ಯವಾಗದ ಆಜ್ಞೆ ಎಂದ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದ್ದು, ಆದ್ರೆ CWMA ನೀಡಿರುವ ಆದೇಶ ಪಾಲಿಸಲು ಸಾಧ್ಯವಾಗದ ಆಜ್ಞೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂಬಂಧ ಟ್ವೀಟ್ (Tweet) ಮಾಡಿರುವ ಬೊಮ್ಮಾಯಿ, ಕಾನೂನು ಹೋರಾಟ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆದೇಶದಂತೆ ತಮಿಳುನಾಡಿಗೆ (Tamil Nadu) ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ ಎಂದಿದ್ದಾರೆ.

ಈ ಕುರಿತು ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ ಮಾಡಿಕೊಡಬೇಕು. ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!