May 9, 2026
Saturday, May 9, 2026
spot_img

ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾವೇರಿ ವನ್ಯಧಾಮದ ಕಾಡಾನೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆಯೊಂದು ಇದೀಗ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ನಡೆದಿದೆ.

ಗೋಪಿನಾಥಂ ಜಲಾಶಯದಲ್ಲಿ ನೀರು ಕುಡಿಯಲು‌ ಬಂದಿದ್ದ ವೇಳೆ ಕಾಡಾನೆ ಗಾಯಗೊಂಡಿತ್ತು. ಈ ವಿಷಯವನ್ನು ಸ್ಥಳೀಯರು, ಅರಣ್ಯ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಆನೆಗೆ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾಡಾನೆ ಸಾವನ್ನಪ್ಪಿದೆ.

ಇನ್ನೂ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಪ್ರದೇಶದ ಕೃಷ್ಣಯ್ಯನ ಕಟ್ಟೆ ಡ್ಯಾಂ ಸಮೀಪ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಪ್ರವಾಸಿಗರ ಗಮನ ಸೆಳೆದಿದೆ. ಡ್ಯಾಂ ಬಳಿ ನೀರು ಕುಡಿಯಲು ಹಾಗೂ ಆಹಾರ ಅರಸಿ ಬಂದಿದ್ದ ಕಾಡಾನೆಗಳು ಗುಂಪು ಗುಂಪಾಗಿ ಸಂಚರಿಸುತ್ತಿರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಹಿಡಿದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !