ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರ ವಕೀಲ ಆನಂದ್ ಡಾಗಾ ಅವರನ್ನು ಸಿಬಿಐ ಅಧಿಕಾರಿಗಳು ಗುರವಾರ ಮುಂಬೈನಲ್ಲಿ ಬಂಧಿಸಿದ್ದಾರೆ.
ಬಾಂಬೆ ಹೈಕೋರ್ಟ್ನ ನಿರ್ದೇಶನದಂತೆ ದೇಶಮುಖ್ ವಿರುದ್ಧ ಕೈಗೊಂಡಿರುವ ತನಿಖೆಯನ್ನು ತಿರುಚಲು ಪ್ರಯತ್ನಿಸಿದ ಆರೋಪದ ಮೇಲೆ ಡಾಗಾ ಅವರನ್ನು ಬಂಧಿಸಿ, ಸಿಬಿಐ ಕಚೇರಿಗೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ಸಬ್ಇನ್ಸ್ಪೆಕ್ಟರ್ ಅಭಿಷೇಕ್ ತಿವಾರಿ ಎಂಬುವರು ಡಾಗಾ ಅವರಿಂದ ಲಂಚ ಪಡೆದಿದ್ದರು ಎಂಬ ಆರೋಪದ ಮೇಲೆ ಬುಧವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ. ತಿವಾರಿ ಹಾಗೂ ಡಾಗಾ ಇಬ್ಬರನ್ನೂ ಕೋರ್ಟ್ ಗೆ ಹಾಜರು ಪಡಿಸುವುದಾಗಿ ತಿಳಿಸಿದ್ದಾರೆ.