Saturday, March 25, 2023

Latest Posts

ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ನಿವಾಸದ ಮೇಲೆ ಸಿಬಿಐ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ಪಾಟ್ನಾದಲ್ಲಿರುವ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಾಳಿ ನಡೆಸಿದೆ.

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಪತ್ನಿ ರಾಬ್ರಿದೇಬಿ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ಮಾಡಿದೆ.

ಲಾಲು ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಮತ್ತು ಮಗಳು ಮಿಸಾ ಅವರಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಪಾಟ್ನಾ, ಗೋಪಾಲ್‌ಗಂಜ್ ಮತ್ತು ದೆಹಲಿಯ 13 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಅತ್ಯಂತ ಕಡಿಮೆ ಬೆಲೆಗೆ ಭೂಮಿಗೆ ಬದಲಾಗಿ ಕೆಲವು ಅನರ್ಹ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಾದ ಪ್ರಕರಣ ಇದಾಗಿದ್ದು, ಸಿಬಿಐ ಎಫ್‌ಐಆರ್‌ನಲ್ಲಿ ಲಾಲು ಪ್ರಸಾದ್, ರಾಬ್ರಿ ದೇವಿ, ಮಿಸಾ ಮತ್ತು ಇತರ 13 ಜನರಿಗೆ ದೆಹಲಿ ನ್ಯಾಯಾಲಯವು ಕಳೆದ ತಿಂಗಳು 27 ರಂದು ಸಮನ್ಸ್ ಜಾರಿ ಮಾಡಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಲ್ಲಿಸಿದ್ದ ಚಾರ್ಜ್‌ಶೀಟ್‌ನ ವಿಚಾರಣೆಯನ್ನು ಸ್ವೀಕರಿಸಿದ ನಂತರ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಮಾರ್ಚ್ 15 ರಂದು ಮೂವರು ನಾಯಕರಿಗೆ ಸಮನ್ಸ್ ನೀಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!