ಲಾಲು ಪ್ರಸಾದ್ ಯಾದವ್‌ ಗೆ ಶಾಕ್ ಕೊಟ್ಟ ಸಿಬಿಐ: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರದ ಮಾಜಿ ಸಚಿವ ಲಾಲು ಪ್ರಸಾದ್ ಯಾದವ್‌ಗೆ (Lalu Prasad Yadav) ಮತ್ತೆ ಸಂಕಷ್ಟ ಎದುರಿಯಾಗಿದೆ. ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳವು ಲಾಲು ಪ್ರಸಾದ್ ಯಾದವ್‌ ಅವರಿಗೆ ನೀಡಲಾದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಆಗಸ್ಟ್ 25 ರಂದು ಅರ್ಜಿಯ ವಿಚಾರಣೆ ನಡೆಸಲಿದೆ.

ಲಾಲು ಪ್ರಸಾದ್ ಯಾದವ್​​ಗೆ ಜಾರ್ಖಂಡ್ ಹೈಕೋರ್ಟ್ ನಾಲ್ಕು ಪ್ರಕರಣಗಳಲ್ಲಿ ಜಾಮೀನು ನೀಡಿತ್ತು. ಆದರೆ ಈ ಆದೇಶಗಳನ್ನು ಸಿಬಿಐ ಪ್ರಶ್ನಿಸಿದೆ. ಈ ಪ್ರಕರಣಗಳಲ್ಲಿ ಅಪರಾಧಿಯಾಗಿದ್ದು, ಅವರ ಮೇಲ್ಮನವಿಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ ಎಂದು ಹೇಳಿದೆ.

950 ಕೋಟಿ ರೂ. ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದಾದ್ಯಂತ ಅನೇಕ ಸರ್ಕಾರಿ ಖಜಾನೆಗಳಿಂದ ಪಶುಗಳ ಮೇವಿನ ಹಣವನ್ನು ದುರುಪಯೋಗಪಡಿಸಿಕೊಂಡಿದೆ. ಇದಕ್ಕೆ ಅನುಕೂಲ ಮಾಡಿಕೊಡಲು ಪಶು ಸಂಗೋಪನಾ ಇಲಾಖೆಯಿಂದ ನಕಲಿ ಬಿಲ್ ನೀಡಲಾಗಿತ್ತು ಎನ್ನಲಾಗಿದೆ. 1996ರಲ್ಲಿ ಲಾಲು ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಚೈಬಾಸಾ ಡೆಪ್ಯುಟಿ ಕಮಿಷನರ್ ಅಮಿತ್ ಖರೆ ಅವರು ಈ ಅಕ್ರಮವನ್ನು ಪತ್ತೆ ಮಾಡಿದ್ದರು.

ಕಳೆದ ತಿಂಗಳು, ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ, ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!