ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಬಕಾರಿ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ ದಾಳಿ ನಡೆಸಿದೆ. ಈ ರಾಷ್ಟ್ರ ರಾಜಧಾನಿ ದೆಹಲಿಯ 20 ಸ್ಥಳಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಆದರೆ ಮನೀಶ್ ಸಿಸೋಡಿಯಾ ಅವರು ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದು ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.

ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು “ಪಕ್ಷವು ಸಿಬಿಐ ಅನ್ನು ಸ್ವಾಗತಿಸುತ್ತದೆ ಮತ್ತು ಈ ಹಿಂದೆ ಪಕ್ಷದ ಇತರ ನಾಯಕರ ಮೇಲೂ ದಾಳಿಗಳು ನಡೆದಿವೆ ಆದರೆ ಅವುಗಳಿಂದ ಏನೂ ಹೊರಬಂದಿಲ್ಲ. ದೆಹಲಿಯ ಆರೋಗ್ಯ ಮತ್ತು ಶಿಕ್ಷಣದ ಮಾದರಿಗಳನ್ನು ಜಗತ್ತು ಮೆಚ್ಚುತ್ತಿದೆ ಮತ್ತು ಆದ್ದರಿಂದ ಆರೋಗ್ಯ ಮತ್ತು ಶಿಕ್ಷಣ ಸಚಿವರ ಮೇಲೆ ದಾಳಿ ನಡೆಸಲಾಗುತ್ತಿದೆ ” ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!