BIG NEWS | ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಿದ್ದಾರೆ.
ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದಾರೆ.
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಸಂಬಂಧ ಜಾರಿನಿರ್ದೇಶನಾಲಯ (ಇ.ಡಿ)ದ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇಡಿ ವಿಚಾರಣೆ ಬಳಿಕ ಡಿಕೆಶಿಗೆ ಸಿಬಿಐ ಶಾಕ್ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!