ಉದ್ಯೋಗಕ್ಕಾಗಿ ಭೂಮಿ ಪ್ರಕರಣ : ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಗೆ ವಿಚಾರಣೆಗೆ ಕರೆದ ಸಿಬಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಸಿಬಿಐ ವಿಚಾರಣೆಗೆ ಕರೆದಿದ್ದಾರೆ. ಈ ಕುರಿತು ತೇಜಸ್ವಿ ಯಾದವ್ ಅವರಿಗೆ ಸಿಬಿಐ ನೋಟಿಸ್‌ ಕಳುಹಿಸಿದೆ.

ತೇಜಸ್ವಿ ಯಾದವ್ ಗೆ ನೀಡಿರುವ ಎರಡನೇ ಸಮನ್ಸ್ ಇದಾಗಿದ್ದು, ಮೊದಲನೆಯದನ್ನು ಫೆಬ್ರವರಿ 4 ರಂದು ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ರಾಜಧಾನಿಯಲ್ಲಿರುವ ಬಿಹಾರದ ಉಪ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಒಂದು ದಿನದ ಬಳಿಕ ಈ ಸಮನ್ಸ್ ಬಂದಿದೆ.

ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ದೆಹಲಿ ಮತ್ತು ಬಿಹಾರದಾದ್ಯಂತ ಅನೇಕ ಸ್ಥಳಗಳಲ್ಲಿ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಅವರ ಅನೇಕ ಸಂಬಂಧಿಕರ ವಿರುದ್ಧ ಇಡಿ ದಾಳಿ ನಡೆಸಿತ್ತು.

ದೆಹಲಿಯಲ್ಲಿರುವ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಮತ್ತು ಬಿಹಾರದ ಆರ್‌ಜೆಡಿ ನಾಯಕ ಮತ್ತು ಮಾಜಿ ಶಾಸಕ ಅಬು ದೋಜಾನಾ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇದುವರೆಗೆ ಮೂವರನ್ನು ಬಂಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!