ಜಮ್ಮು- ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಗೆ CBI ಯಿಂದ ಸಮನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ಕೇಂದ್ರೀಯ ತನಿಖಾ ದಳ (CBI) ಸಮನ್ಸ್ ನೀಡಿದೆ.
ಈ ಹಿಂದೆ ಅಧಿಕಾರದಲ್ಲಿದ್ದಾಗ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದರು ಎಂದು ಆರೋಪವಿದ್ದು,ಈ ಹಿನ್ನೆಲೆ ಸಿಬಿಐ ಹಾಜರಾಗುವಂತೆ ಕೇಳಿದೆ.

ಏಪ್ರಿಲ್ 27 ಅಥವಾ 28 ರಂದು ವಿಚಾರಣೆಗೆ ಸತ್ಯಪಾಲ್ ಮಲಿಕ್ ಹಾಜರಾಗಲಿದ್ದಾರೆ ಎನ್ನಲಾಗುತ್ತಿದೆ.

ಆಗಸ್ಟ್ 23, 2018 ಮತ್ತು ಅಕ್ಟೋಬರ್ 30, 2019 ರ ನಡುವೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ಕಡತಗಳನ್ನು ತೆರವುಗೊಳಿಸಲು ತನಗೆ 300 ಕೋಟಿ ರೂಪಾಯಿ ಲಂಚ ನೀಡಲಾಯಿತು ಎಂದು ಸತ್ಯಪಾಲ್ ಮಲಿಕ್ ಹೇಳಿಕೊಂಡಿದ್ದರು.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿಬಿಐ ಸತ್ಯಪಾಲ್ ಮಲಿಕ್ ಅವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!