ಸಿಬಿಎಸ್‌ಸಿ 12ನೇ ತರಗತಿ ಫಲಿತಾಂಶ ಪ್ರಕಟ: ಈ ಬಾರಿಯೂ ಹೆಣ್ಮಕ್ಳದ್ದೇ ಮೇಲುಗೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 12 ನೇ ತರಗತಿಯ ಪರೀಕ್ಷೆಯ ಫಲಿತಾಂಶ ಇಂದು ಬಿಡುಗಡೆ ಮಾಡಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೇಕಡಾವಾರು ಸಂಖ್ಯೆ 92.71 ರಷ್ಟಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್ ಮತ್ತು ಶಾಲೆಯ ಸಂಖ್ಯೆಯನ್ನು cbse.gov.in, results.cbse.nic.in ವೆಬ್‌ಸೈಟ್‌ನಲ್ಲಿ ನಮೂದಿಸಿ ಫಲಿತಾಂಶ ಪರಿಶೀಲಿಸಬಹುದು.

ಈ ಬಾರಿಯೂ ಸಹ ಹೆಣ್ಣುಮ್ಮಕ್ಕಳೇ ಮೇಲುಗೈ ಸಾಧಿಸಿದ್ದು, ಗಂಡುಮಕ್ಕಳಿಗಿಂತ 3.29% ರಷ್ಟು ಹೆಚ್ಚು ಫಲಿತಾಂಶ ದಾಖಲಾಗಿದೆ. ಶೇ. 94.54ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ. 91.25ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ.

ಈ ವರ್ಷ 12ನೇ ತರಗತಿಯ ಅವಧಿ-2 ಪರೀಕ್ಷೆಗಳು ಏಪ್ರಿಲ್ 26 ರಿಂದ ಜೂನ್ 4 ರವರೆಗೆ ನಡೆದಿದೆ. ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಆಂತರಿಕ ಮೌಲ್ಯಮಾಪನ ಅಂಕಗಳು, ಪ್ರಾಜೆಕ್ಟ್ ಕೆಲಸಗಳು, ಪ್ರಾಯೋಗಿಕ ಪರೀಕ್ಷೆಗಳು ಮತ್ತು ಪೂರ್ವ-ಬೋರ್ಡ್ ಪರೀಕ್ಷೆಗಳ ವಿವರಗಳನ್ನು ಅಂಕಪಟ್ಟಿ ಒಳಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!