Tuesday, February 27, 2024

ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಬೇಟೆ: ಹೈಟೆಕ್ ವೇಶ್ಯಾವಾಟಿಕೆ ಆರೋಪಿಗಳು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯೊಂದಕ್ಕೆ ದಿಢೀರ್ ದಾಳಿ ನಡೆಸಿದ ಸಿಸಿಬಿ ತಂಡ 44 ಮಹಿಳೆಯರು, 34 ’ಗ್ರಾಹಕ’ರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.
ಇಲ್ಲಿ ಬಹುಮಹಡಿ ಕಟ್ಟಡವೊಂದರಲ್ಲಿ ಸ್ಪಾ ಹೆಸರಿನಲ್ಲಿ ಈ ದಂಧೆ ನಡೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೊರ ರಾಜ್ಯದ ವ್ಯಕ್ತಿಯೋರ್ವ ಹೊರ ರಾಜ್ಯ, ಹೊರ ದೇಶದಿಂದ ಯುವತಿಯರು, ಮಹಿಳೆಯರನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!