ಬೆಂಗಳೂರಿನ ಅಂಚೆ ಕಚೇರಿ, ಕೋರಿಯರ್ ಏಜೆನ್ಸಿಯಲ್ಲಿ ಸಿಸಿಬಿ ​​ತಪಾಸಣೆ, ಡ್ರಗ್ಸ್‌ ವಿರುದ್ಧ ಸಮರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೊಸ ವರ್ಷಾಚರಣೆ  ಹಿನ್ನೆಲೆಯಲ್ಲಿ ಡ್ರಗ್ ಜಾಲದ ಮೇಲೆ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದಾರೆ. ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದು, ಈಗಾಗಲೆ ಕೋಟ್ಯಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಪೊಲೀಸರು ಶನಿವಾರ (ಡಿಸೆಂಬರ್​ 07) ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿದರು. ಬೆಂಗಳೂರಿನ ಕೊರಿಯರ್​ ಏಜೆನ್ಸಿ ಮತ್ತು ಅಂಚೆ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಂಪಂಗಿ ರಾಮನಗರದ ಕೊರಿಯರ್​ ಏಜೆನ್ಸಿಯಲ್ಲಿ ಸಿಸಿಬಿ ಮತ್ತು ಶ್ವಾನದಳ ಪಾರ್ಸೆಲ್​ಗಳ ಪರಿಶೀಲನೆ ನಡೆಸಿತು.

ಈ ವಿಚಾರವಾಗಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾತನಾಡಿ, ವಿದೇಶದಿಂದ ಬರುತ್ತಿದ್ದ ಪಾರ್ಸಲ್‌ಗಳಲ್ಲಿ ಡ್ರಗ್ಸ್​ ಪತ್ತೆಯಾಗಿತ್ತು. ಹೀಗಾಗಿ, ಒಟ್ಟು ಏಳು ಕಡೆ ಪರಿಶೀಲನೆ ನಡೆಸಲಾಗಿದೆ. ಹೊಸ ವರ್ಷ ಹಿನ್ನೆಲೆ ಡ್ರಗ್ಸ್ ಹೆಚ್ಚಾಗಿ ಪೂರೈಸುತ್ತಿರುವ ಮಾಹಿತಿ ಇದೆ. ತಪ್ಪು ವಿಳಾಸ ಕೊಟ್ಟು ಕೊರಿಯರ್​ಗಳಲ್ಲಿ ಸರಬರಾಜು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊರಿಯರ್​ ಕಚೇರಿ, ಅಂಚೆ ಕಚೇರಿಗಳಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!