ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೆಜಿ 200 ಗ್ರಾಂ ಗಾಂಜಾ ಸೀಜ್, ಮೂವರು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ರೋಪಿಗಳಿಂದ 3 ಕೆಜಿ 200 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ ಬರೋಬ್ಬರಿ 1.80 ಲಕ್ಷವಾಗಿದೆ.

ಬೆಂಗಳೂರು ನಗರ ಪೊಲೀಸರು, ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾರ್ಚ್ ೮ ರಂದು ಠಾಣಾ ಸರಹದ್ದಿನ ಎಂ.ಆರ್.ಲೇಔಟ್‌ನ ರಾಣಿ ಕ್ರಾಸ್ ಬಳಿ ಇಬ್ಬರು ವ್ಯಕ್ತಿಗಳು ಒಂದು ದ್ವಿ-ಚಕ್ರ ವಾಹನದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ತಿಳಿದು, ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ದಾಳಿ ಮಾಡಿ, ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳಿಬ್ಬರಿಂದ 3 ಕೆ.ಜಿ 200 ಗಾಂಜಾ, 02 ಮೊಬೈಲ್ ಫೋನ್, 01 ತೂಕದ ಯಂತ್ರ ಹಾಗೂ 01 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು ಎಂದಿದೆ.

ವಶಕ್ಕೆ ಪಡೆದ ಇಬ್ಬರು ಆರೋಪಿಗಳನ್ನು ವಿಚಾರಣೆ ಮಾಡಲಾಗಿ, ಮತ್ತೋರ್ವ ಸಹಚರನ ಬಗ್ಗೆ ಮಾಹಿತಿಯನ್ನು ನೀಡಿದ್ದು, ಆ ಸಹಚರನು ಗಾಂಜಾವನ್ನು ಮಾರಾಟ ಮಾಡಿಕೊಡುವಂತೆ ಆರೋಪಿಗಳಿಗೆ ನೀಡುತ್ತಿದ್ದನು. ಈ ಆರೋಪಿಗಳಿಬ್ಬರ ಮಾಹಿತಿ ಮೇರೆಗೆ, ಸಹಚರನು ವಾಸವಿರುವ ಮನೆಯಾದ ಬಿ.ಟಿ.ಎಂ ಲೇಔಟ್ ನ್ಯೂ ಗುರಪ್ಪನಪಾಳ್ಯದಿಂದ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೋಪ್ಪಿಕೊಂಡಿದ್ದು, ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಕಡಿಮೆ ಬೆಲೆಗೆ ಓರ್ವ ಅಪರಿಚಿತ ವ್ಯಕ್ತಿಯಿಂದ ಪಡೆದಿರುವುದಾಗಿ ತಿಳಿಸಿದ್ದಾನೆ.

ಆರೋಪಿಗಳ ವಶದಿಂದ 3 ಕೆ.ಜಿ 200 ಗ್ರಾಂ ಗಾಂಜಾ, 02 ಮೊಬೈಲ್ ಫೋನ್, 01 ತೂಕದ ಯಂತ್ರ ಹಾಗೂ 01 ದ್ವಿ-ಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ ಎಂದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!