March 28, 2026
Saturday, March 28, 2026
spot_img

ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ‌ ಪದಾರ್ಥಗಳನ್ನು ಸಿಸಿಬಿ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8 ಕೆ.ಜಿ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈಸಂಬಂಧ ತಾಂಜೇನಿಯಾ ಮೂಲದ ನ್ಯಾನ್ಸಿ ಮತ್ತು ನೈಜೀರಿಯಾ ಮೂಲದ ಎಮುನಲ್ ಅರೆಂಜಿ ಇಡಿಕೋ ಎಂಬ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ.
ಬಂಧಿತ ನ್ಯಾನ್ಸಿ ಮೂರು ವರ್ಷಗಳ ಹಿಂದೆ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದಳು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಈಕೆ ಡ್ರಗ್ ಪೆಡ್ಲಿಂಗ್‌ನಲ್ಲಿ ಸಕ್ರಿಯಳಾಗಿದ್ದಳು. ಈಕೆಗೆ ಸಹಕರಿಸುತ್ತಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿಗಳು ಸ್ಥಳೀಯರು, ವಿದ್ಯಾರ್ಥಿಗಳು ಮತ್ತು ಐಟಿ-ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಬೆಲೆಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು.

ಇನ್ನೊಬ್ಬ ಆರೋಪಿ ಎಮುನಲ್ ಅರೆಂಜಿ ಇಡಿಕೋ ನಾಲ್ಕು ವರ್ಷಗಳ ಹಿಂದೆ ವ್ಯಾಪಾರ ವೀಸಾದಡಿ ಭಾರತಕ್ಕೆ ಬಂದಿದ್ದ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಈತ ದೆಹಲಿಯಿಂದ ಡ್ರಗ್ಸ್ ತರಿಸಿ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದನು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !