ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ 3.45 ಕೋಟಿ ನಗದು ಹಣ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಕಮಿಷ್ನರ್ ಬಿ.ದಯಾನಂದ್ ಮಾಹಿತಿ ನೀಡಿದ್ದು,ದಾಳಿ‌ ಮಾಡಿ ಬರೋಬ್ಬರಿ ಮೂರು ಕೋಟಿ 45 ಲಕ್ಷ ರೂಪಾಯಿ ನಗದು ವಶಪಡೆಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ 66 ಜನರನ್ನು ಠಾಣೆಗೆ ಕರೆಸಿ ಮಾಹಿತಿ ಪಡೆದು ನೊಟೀಸ್ ನೀಡಲಾಗಿದೆ. ಐಪಿಸಿ ಸೆಕ್ಷನ್ 41ರ ಅಡಿ ನೊಟೀಸ್ ನೀಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.

ಅನಧಿಕೃತವಾಗಿ ನಡೆಸಲಾಗುತ್ತಿದ್ದ ಬೆಟ್ಟಿಂಗ್​ನ ಲಾಭ ಯಾರು ಪಡೆದುಕೊಳ್ಳುತ್ತಿದ್ದಾರೆ, ಇದರ ಹಿಂದೆ ಯಾರಿದಾರೆ ಎಂಬುದರ ಬಗ್ಗೆ ಸಿಸಿಬಿ ತನಿಖಾಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ರೀತಿ ಅಕ್ರಮ‌ ಬೆಟ್ಟಿಂಗ್​ನಿಂದ ಜಿಎಸ್​ಟಿ ವಂಚನೆ ಆಗಿದೆ. ಶೇ.28 ರಷ್ಟು ಜಿಎಸ್​ಟಿ ಕಟ್ಟಬೇಕು. ಆದರೆ ಜಿಎಸ್​ಟಿ ತೆರಿಗೆ ವಂಚನೆ ಮಾಡಲಾಗಿದೆ. ಅನಧಿಕೃತ ವ್ಯಕ್ತಿಗಳು ಕೌಂಟರ್ ನಡೆಸುತ್ತಿದ್ದ ಮಾಹಿತಿ ಸಿಕ್ಕಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಪಡೆದು ತನಿಖೆ ನಡೆಸಲಾಗುತ್ತದೆ ಎಂದರು.

ಜನರಿಂದ ಹೆಚ್ಚು ಹಣ ಪಡೆದು ಕಡಿಮೆ ಮೊತ್ತಕ್ಕೆ ಟಿಕೆಟ್ ಮಾರಾಟ, ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್​ಟಿ ಕಟ್ಟದೆ ವಂಚನೆ ಮಾಡಿದ ಆರೋಪ ಮೇಲೆ ನಿನ್ನೆ ಸಿಸಿಬಿ ಪೊಲೀಸರು ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ದಾಳಿ ವೇಳೆ 3 ಕೋಟಿ 45 ಲಕ್ಷ ರೂ. ಹಣ ಜಪ್ತಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!