June 29, 2026
Monday, June 29, 2026
spot_img

ಡ್ರಗ್ಸ್ ಮಾಫಿಯಾಗೆ ಸಿಸಿಬಿ ಶಾಕ್: ಬೆಂಗಳೂರಿನಲ್ಲಿ 21 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮಹತ್ವದ ಕಾರ್ಯಾಚರಣೆ ನಡೆಸಿದೆ.

ದಾಳಿಯ ವೇಳೆ ಸುಮಾರು 21 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.

ಟ್ರಾಲಿ ಬ್ಯಾಗ್‌ನಲ್ಲಿ ಡ್ರಗ್ಸ್ ಸಾಗಣೆ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಡ್ರಗ್ಸ್ ಅನ್ನು ಟ್ರಾಲಿ ಬ್ಯಾಗ್‌ಗಳಲ್ಲಿ ಬಚ್ಚಿಟ್ಟು ಬೆಂಗಳೂರಿಗೆ ಸಾಗಿಸಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 10 ಕೆಜಿ 270 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು ಜಪ್ತಿ ಮಾಡಿದ್ದಾರೆ.

ಹೊರವಲಯದ ಮನೆಗಳಲ್ಲಿ ವಾಸ

ಬಂಧಿತರು ನಗರದ ಹೊರವಲಯದ ಮಾದನಾಯಕನಹಳ್ಳಿ ಮತ್ತು ಬೈಲಕೋಣೆನಹಳ್ಳಿ ಪ್ರದೇಶಗಳಲ್ಲಿ ಬಾಡಿಗೆ ಮನೆ ಪಡೆದು ವಾಸಿಸುತ್ತಿದ್ದರು. ಅಲ್ಲಿಂದಲೇ ಮಾದಕ ವಸ್ತುಗಳ ವಿತರಣೆಯ ಜಾಲವನ್ನು ನಡೆಸುತ್ತಿದ್ದರೆಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:

ವೀಸಾ ಅವಧಿ ಮುಗಿದರೂ ಭಾರತದಲ್ಲೇ ಉಳಿದಿದ್ದರು

ಮೂವರು ಆರೋಪಿಗಳು ಪ್ರವಾಸಿ ವೀಸಾದ ಮೂಲಕ ಭಾರತಕ್ಕೆ ಬಂದಿದ್ದು, ವೀಸಾ ಅವಧಿ ಮುಗಿದ ಬಳಿಕವೂ ಕಾನೂನುಬಾಹಿರವಾಗಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಲಸೆ ನಿಯಮ ಉಲ್ಲಂಘನೆ ಸಂಬಂಧವೂ ಪ್ರತ್ಯೇಕ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ವಿದ್ಯಾರ್ಥಿಗಳೇ ಪ್ರಮುಖ ಗುರಿ

ತನಿಖೆ ವೇಳೆ ಆರೋಪಿಗಳು ನಗರದ ವಿವಿಧ ಭಾಗಗಳಲ್ಲಿನ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಎಂಡಿಎಂಎ ಪೂರೈಕೆ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಜಾಲದ ಹಿಂದೆ ಇನ್ನೂ ಯಾರು ಇದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !