April 28, 2026
Tuesday, April 28, 2026
spot_img

ಆರ್ ಸಿಬಿ ಮ್ಯಾಚ್ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೈಕೊಟ್ಟ ಸಿಸಿಟಿವಿ: ರಾಜ್ಯ ಕ್ರಿಕೆಟ್‌ ಸಂಘ ಕೊಟ್ಟ ಉತ್ತರವೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಮ್ಯಾಚ್ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಬರೋಬ್ಬರಿ 240 ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಈ ಬೆನ್ನಲ್ಲೇ ಭದ್ರತಾ ಲೋಪ ಕುರಿತು ಅನುಮಾನಗಳು ವ್ಯಕ್ತವಾಗಿತ್ತು.

ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಘ ಸ್ಪಷ್ಟನೆ ನೀಡಿದ್ದು, ಇದು ಸಂಪೂರ್ಣ ಖಾಸಗಿ ಹಿಡಿತದಲ್ಲಿದ್ದು, ಈ ಕ್ಯಾಮೆರಾಗಳು ಪೊಲೀಸ್ ಇಲಾಖೆಯ ಭದ್ರತಾ ಮೂಲಸೌಕರ್ಯದ ಭಾಗವಲ್ಲ ಎಂದು ಸ್ಪಷ್ಟನೆ ನೀಡಿದೆ.

ಪಂದ್ಯದ ಸಮಯ ಕ್ರೀಡಾಂಗಣದಲ್ಲಿ ಭದ್ರತೆ ವಿಚಾರದಲ್ಲಿ ಪೊಲೀಸ್ ಇಲಾಖೆ ಸ್ವತಂತ್ರ ವ್ಯವಸ್ಥೆಯನ್ನು ಹೊಂದಿದ್ದು, ಈ ಸಂಬಂಧ ಖಾಸಗಿ ಸಿಸಿಟಿವಿ ವ್ಯವಸ್ಥೆಗಳೊಂದಿಗೆ ಯಾವುದೇ ಸಂಬಂಧವಿಲ್ಲ. ಅಲ್ಲಿನ ಸಮಸ್ಯೆ ಅವರ ವೈಯಕ್ತಿಕ ವಿಚಾರವಾಗಿದ್ದು, ಪಾವತಿ ಸಂಬಂಧಿತ ಸಮಸ್ಯೆಯಿಂದ ಉಂಟಾಗಿದೆ ಎಂದು ಹೇಳಲಾಗಿದೆ. ಹೀಗಾಗಿ ಪೊಲೀಸ್ ಇಲಾಖೆ ಅಥವಾ ಕೆಎಸ್‌ಸಿಎಯ ಈ ವಿಚಾರದಲ್ಲಿ ಯಾವುದೇ ಪಾತ್ರವಿಲ್ಲ ಎಂದು ಸಂಘ ತಿಳಿಸಿದೆ.

ಇನ್ನು ಪಂದ್ಯ ಶುರುವಾಗುವ ಮುನ್ನ ಕ್ರೀಡಾಂಗಣದ ದ್ವಾರಗಳನ್ನು ಪ್ರವೇಶಕ್ಕೆ ಜನರಿಗೆ ತೆರೆಯುವ ಮುನ್ನ ಈ ಕುರಿತು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಯಾವುದೇ ಭದ್ರತಾ ವೈಫಲ್ಯ ಉಂಟಾಗಿಲ್ಲ ಎಂದು ಕೆಎಸ್‌ಸಿಎ ಸ್ಪಷ್ಟಪಡಿಸಿದೆ.

ಇದರಿಂದಾಗಿ ಅಲ್ಲಿ ಪಂದ್ಯ ನೋಡಲು ಬಂದ ಪ್ರೇಕ್ಷಕರು, ಅದೇ ರೀತ್ ಆಟಗಾರರ ಸುರಕ್ಷತೆಗೆ ಯಾವುದೇ ತೊಂದರೆ ಉಂಟಾಗಿಲ್ಲ. ಸಮಸ್ಯೆಗಳನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ನಿಭಾಯಿಸಲಾಗಿದೆ ಎಂದು ಸಂಘ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !