ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮಥುರಾದಲ್ಲಿ ಯುವಕನೊಬ್ಬ ಶಾಲಾ ಬಾಲಕಿಗೆ ಕಿರುಕುಳ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಅಡ್ಡಗಟ್ಟಿ ಕೈ ಹಿಡಿದುಕೊಂಡು ಬಾಲಕಿಗೆ ಮುಜುಗರವಾಗುವಂತೆ ವರ್ತಿಸಿದ್ದಾನೆ. ಉತ್ತರ ಪ್ರದೇಶದ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಕ್ರೋಲ್ ಗ್ರಾಮದ ಬಿಷ್ಣು ಎಂಬಾತನೇ ಕಿರುಕುಳ ನೀಡಿದ ವ್ಯಕ್ತಿ ಎಂದು ಬಹಿರಂಗವಾಗಿದೆ. ಈ ಸಂದರ್ಭದಲ್ಲಿ ಆ ಮಾರ್ಗವಾಗಿ ಹೋಗುತ್ತಿದ್ದ ಯಾರೊಬ್ಬರೂ ಯುವಕನನ್ನು ತಡೆಯಲು ಪ್ರಯತ್ನಿಸಲಿಲ್ಲ. ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿ ತಾಯಿ ಆಕೆಯನ್ನು ಠಾಣೆಗೆ ಕರೆತಂದು ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ.
ಆರೋಪಿಯನ್ನು ಶೀಘ್ರ ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಾಲಕಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆದರೆ ಪೊಲೀಸರು ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲವಂತೆ.