ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆ ಒಂದು ದೇವಾಲಯವಿದ್ದಂತೆ, ಶಿಕ್ಷಕರು ದೇವರಿದ್ದಂತೆ. ಏಕೆಂದರೆ ಮಕ್ಕಳಿಗೆ ಪಾಠ ಹೇಳಿಕೊಟ್ಟು, ಸರಿದಾರಿಯಲ್ಲಿ ನಡೆಯುವಂತೆ ನೋಡಿಕೊಳ್ಳುವವರು ಶಿಕ್ಷಕರೇ. ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದು ಎಂಬುದನ್ನು ತಿಳಿಸುವುದು ಪಾಲಕರು ಮತ್ತು ಶಿಕ್ಷಕರ ಜವಾಬ್ದಾರಿ. ಆದರೆ, ಕೆಲವು ಶಿಕ್ಷಕರು ದಾರಿ ತಪ್ಪುತ್ತಿದ್ದು, ಕಾಮದಿಂದ ಕುರುಡರಾಗಿ ದುಷ್ಕೃತ್ಯಗಳನ್ನು ಮಾಡುತ್ತಾರೆ. ನಾಚಿಕೆಗೇಡಿನ ಕೆಲಸಗಳನ್ನು ಮಾಡಿ ಪವಿತ್ರವಾದ ಶಿಕ್ಷಕ ವೃತ್ತಿಗೆ ಕಳಂಕ ತರುತ್ತಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ಆಕ್ರೋಶದ ಘಟನೆಯೊಂದು ನಡೆದಿದೆ. ಶಾಲೆಯ ಪ್ರಾಂಶುಪಾಲರೊಬ್ಬರು ಮಾಡಿದ ಕೆಲಸ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಆ ಶಾಲೆಯಲ್ಲಿ ಬಾಲಕಿಯರ ಬಾತ್ ರೂಂನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾನೆ. ವಿಚಾರ ಬೆಳಕಿಗೆ ಬಂದ ಕೂಡಲೇ ಆಕ್ರೋಶಗೊಂಡ ವಿದ್ಯಾರ್ಥಿ ಸಂಘದ ಮುಖಂಡರು ಶಾಲಾ ಮುಖ್ಯೋಪಾಧ್ಯಾಯರನ್ನು ಥಳಿಸಿದ್ದಾರೆ. ಬಟ್ಟೆ ಹರಿದು ಅಟ್ಟಾಸಿಕೊಂಡು ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.