‘ಸಿಸಿಟಿವಿ’ ಕಣ್ಗಾವಲಿನಲ್ಲಿ ನಡೆಯಲಿದೆ ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೇ 21, 22 ರಂದು 15,000 ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ  ನಡೆಯಲಿದ್ದು, ಕಟ್ಟು ನಿಟ್ಟಿನ ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಚಿವರು, ಮೇ 21 ಮತ್ತು 22ರಂದು ನಡೆಯುವ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಾಗಿ ರಾಜ್ಯಾದ್ಯಂತ 435 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. 1.06 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಪರೀಕ್ಷಾ ಕೊಠಡಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಈ ದೃಶ್ಯಾವಳಿಗಳನ್ನು ನಿರಂತರ ವೀಕ್ಷಣೆಗೆ ಅಧಿಕಾರಿಗಳನ್ನು ನೇಮಸಲಾಗಿದೆ ಎಂದು ತಿಳಿಸಿದರು.
ಶಿಕ್ಷಕರ ನೇಮಕಾತಿ ಪರೀಕ್ಷೆಯಂದು ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಕೈಗಡಿಯಾರವನ್ನು ಅಭ್ಯರ್ಥಿಗಳು ತರುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ತರಲು ಅವಕಾಶವೂ ಇಲ್ಲ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!