October 8, 2026
Thursday, October 8, 2026

ಸಿಸಿಟಿವಿ ಬಿಚ್ಚಿಟ್ಟ ಜಂತರ್‌ ಮಂತರ್ ಹಿಂಸಾಚಾರ ರಹಸ್ಯ: ಕ್ರಿಮಿನಲ್​ ಹಿನ್ನಲೆಯ 2,873 ವ್ಯಕ್ತಿಗಳು ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ.

ಸಿಸಿಟಿವಿಯ ನೂರಾರು ಜಿಬಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ 2,873 ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ಮುಖ ಗುರುತಿಸುವ ತಂತ್ರಜ್ಞಾನದ ಮೂಲಕ ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರುತಿಸಲಾದವರಲ್ಲಿ 989 ಮಂದಿಯ ವಿರುದ್ಧ ಕೊಲೆ, ಕೊಲೆ ಯತ್ನ, ಅತ್ಯಾಚಾರ, ಅಪಹರಣ, ದರೋಡೆ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಪೋಕ್ಸೊ ಸೇರಿದಂತೆ ಗಂಭೀರ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಕೆಲವರ ವಿರುದ್ಧ ಒಂದಕ್ಕಿಂತ ಹೆಚ್ಚು ಕ್ರಿಮಿನಲ್ ಪ್ರಕರಣಗಳೂ ಇವೆ.

ಇದನ್ನೂ ಓದಿ:

ಜುಲೈ 20 ಮತ್ತು 22ರಂದು ನಡೆದ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಒಡೆದು ನುಗ್ಗುವುದು, ಪೊಲೀಸರ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಹಾಗೂ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ವಿಡಿಯೊಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಮುಂದುವರಿದಿದೆ.

Must Read