ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಪಾಕಿಸ್ತಾನ ನಡುವೆ ಕೊನೆಗೂ ಕದನ ವಿರಾಮ ಘೋಷಣೆ ಆಗಿದೆ. ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ.
ಮೇ.12ರಂದು ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ನಿರ್ಧರಿಸಿದೆ. ಹೀಗಾಗಿ ಇಂದು ಸಂಜೆ 5 ಗಂಟೆಯಿಂದಲೇ ಜಾರಿಗೆ ಬರುವಂತೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ, ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ. ರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.