ಗುಮ್ಮಟ ನಗರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಹೊಸದಿಗಂತ ವರದಿ ವಿಜಯಪುರ:
ಗುಮ್ಮಟ ನಗರದಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆ ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸಿದರು. ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೋನಾ ಸಂಕಷ್ಟದಿಂದ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ಆಚರಿಸಲಾಗಿತ್ತು. ಪ್ರಸಕ್ತ ವರ್ಷ ಸ್ವಾತಂತ್ರ್ಯೋತ್ಸವ ದಿನಾಚರಣೆ ಅದ್ಧೂರಿಯಾಗಿ ಆಚರಿಸಲಾಗಿದ್ದು, ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.
ಈ ಸಂದರ್ಭ ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ರಾಹುಲ್ ಶಿಂಧೆ, ಎಸ್ಪಿ ಎಚ್.ಡಿ. ಆನಂದಕುಮಾರ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!