Wednesday, August 10, 2022

Latest Posts

ಅಮೆರಿಕದಲ್ಲಿ ಅಕ್ಟೋಬರ್ ತಿಂಗಳನ್ನು ‘ಹಿಂದೂ ಪಾರಂಪರಿಕ ಮಾಸ’ವಾಗಿ ಆಚರಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇನ್ನುಮುಂದೆ ಅಮೆರಿಕದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ ಮಾಡಲಾಗುತ್ತಿದೆ.

ಅಮೆರಿಕದ 20 ರಾಜ್ಯಗಳಲ್ಲಿ ಹಾಗೂ 40 ಕ್ಕೂ ಹೆಚ್ಚು ನಗರಗಳಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

ಅಮೆರಿಕಾದಲ್ಲಿ ಅಲ್ಪಸಂಖ್ಯಾತ ಸಮುದಾಯವಾಗಿರುವ ಹಿಂದೂ ಸಮುದಾಯದ ಕೊಡುಗೆಗಳನ್ನು ಗುರುತಿಸುವ ಹಿನ್ನೆಲೆ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸ ಎಂಬ ಘೋಷಣೆಯನ್ನು ಅಧಿಕೃತಗೊಳಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಗತಿಕವಾಗಿ ಹಿಂದೂಗಳು ಅಕ್ಟೋಬರ್ ತಿಂಗಳಲ್ಲಿ  ನವರಾತ್ರಿ, ದಸರಾ, ದೀಪಾವಳಿ ಎಂದು ಸಾಲು ಸಾಲು ಹಬ್ಬಗಳನ್ನು ಆಚರಿಸುತ್ತಾರೆ. ಆದ್ದರಿಂದ ಅಮೆರಿಕ ಹಿಂದೂ ಸಂಘಟನೆ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ ಮಾಡಲು ಮುಂದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss