Friday, December 9, 2022

Latest Posts

ಮಂಗಳೂರಿನಲ್ಲಿ ಸಂಭ್ರಮದ ಶಾಲಾ ಮಕ್ಕಳ ಹಬ್ಬಕ್ಕೆ ಚಾಲನೆ

ಹೊಸದಿಗಂತ ವರದಿ ಮಂಗಳೂರು:

ಕೇಶವ ಸ್ಮೃತಿ ಸಂವರ್ಧನ ಸಮಿತಿಯ ನೇತೃತ್ವದಲ್ಲಿ ಮಂಗಳೂರಿನ ಸಂಘನಿಕೇತನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಕನ್ನಡ ಶಾಲಾ ಮಕ್ಕಳ ಹಬ್ಬಕ್ಕೆ ಶನಿವಾರ ವೈಭವದ ಚಾಲನೆ ದೊರೆಯಿತು.
ಸಭಾ ಕಾರ್ಯಕ್ರಮಕ್ಕೆ ಮತ್ತು ನಗರದ ಗೋಕರ್ಣನಾಥೇಶ್ವರ ಕಾಲೇಜು ಬಳಿಯಿಂದ ನಡೆದ ಜಾಥಾಕ್ಕೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಚಾಲನೆ ನೀಡಿದರು. ಚೆಂಡೆ, ವಾದ್ಯ, ವಿವಿಧ ಆಕರ್ಷಕ ಟ್ಯಾಬ್ಲೋಗಳು ಜಾಥಾದ ಕಳೆ ಹೆಚ್ಚಿಸಿದವು. ಸಾವಿರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡರು.

ಈ ಸಂದರ್ಭ ಸಂವರ್ಧನ ಸಮಿತಿಯ ಅಧ್ಯಕ್ಷ ಡಾ.ವಾಮನ ಶೆಣೈ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಪಿ.ಎಲ್ ಧರ್ಮ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ, ಹೊಸ ದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎಸ್.ಪ್ರಕಾಶ್, ಕನ್ನಡ ಶಾಲಾ ಮಕ್ಕಳ ಹಬ್ಬ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಡಾ.ಕೆ.ಸಿ.ನಾಯ್ಕ್, ಡಾ.ಎಂ.ಪಿ ಶ್ರೀನಾಥ್, ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಸಿಎ ಶಾಂತಾರಾಮ ಶೆಟ್ಟಿ, ಸಹ ಕಾರ್ಯದರ್ಶಿ ರಮೇಶ್ ಕೆ ಮತ್ತಿತರರು ಉಪಸ್ಥಿತರಿದ್ದರು.
ಎರಡು ದಿನಗಳ ಕಾಲ ನಡೆಯುವ ಈ ಸಾಹಿತ್ಯ ಹಬ್ಬದಲ್ಲಿ 15 ಸಾವಿರಕ್ಕೂ ಅಧಿಕ ಮಕ್ಕಳು ಪಾಲ್ಗೊಳ್ಳುತ್ತಿದ್ದಾರೆ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಲ್ಲಿ ಸ್ವಾಭಿಮಾನ ಮೂಡಿಸುವುದು, ಕನ್ನಡ ಶಾಲೆಗಳಿಗೆ ಇನ್ನಷ್ಟು ಮಕ್ಕಳು ಸೇರುವಂತೆ ಪ್ರೇರಪಣೆ ನೀಡುವ ಉದ್ದೇಶದಿಂದ ಈ ಬೃಹತ್ ವಿದ್ಯಾರ್ಥಿ ಸಮ್ಮೇಳನ ಆಯೋಜಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!