ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದು, ದೇಶದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಆಶಿಸಿದ್ದಾರೆ. ಇದರೊಂದಿಗೆ, ಪ್ರತಿ ವರ್ಷದಂತೆ ಈ ಬಾರಿಯೂ ಭಾರತೀಯ ಯೋಧರೊಂದಿಗೆ ತಾವೂ ಹಬ್ಬವನ್ನು ಆಚರಿಸುವ ಸಂಪ್ರದಾಯವನ್ನು ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ, ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
https://x.com/narendramodi/status/2119029619341013080?s=20
ದೇಶದ ಜನತೆಗೆ ಶುಭ ಹಾರೈಸಿದ ಪ್ರಧಾನಿ
ತಮ್ಮ ವೀಡಿಯೊ ಸಂದೇಶದಲ್ಲಿ ದೀಪಾವಳಿಯ ಮಹತ್ವವನ್ನು ವಿವರಿಸಿದ ಪ್ರಧಾನಿ ಮೋದಿ, “ಪವಿತ್ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಇಡೀ ದೇಶವೇ ದೀಪಗಳ ಬೆಳಕಿನಿಂದ ಜಗಮಗಿಸುತ್ತಿದೆ. ನಿಮ್ಮೆಲ್ಲರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಿಮ್ಮ ಭವಿಷ್ಯದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತುಂಬಲಿ” ಎಂದು ಹಾರೈಸಿದ್ದಾರೆ.
ಇದನ್ನೂ ಓದಿ:
ವೀರ ಯೋಧರೊಂದಿಗೆ ಹಬ್ಬದ ಸಂಭ್ರಮ
ದೇಶ ಕಾಯುವ ಯೋಧರೊಂದಿಗೆ ತಮಗಿರುವ ಭಾವನಾತ್ಮಕ ಸಂಬಂಧವನ್ನು ಉಲ್ಲೇಖಿಸಿದ ಅವರು, “ನಿಮ್ಮಂತೆಯೇ ನಾನೂ ಕೂಡ ದೀಪಾವಳಿಯನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತೇನೆ. ನಿಮಗೆ ತಿಳಿದಿರುವಂತೆ, ಪ್ರತಿ ವರ್ಷ ನಮ್ಮ ಹೆಮ್ಮೆಯ ಯೋಧರ ಮಧ್ಯೆ ಈ ದಿನವನ್ನು ಕಳೆಯುವುದು ನನಗೆ ಒಂದು ಸಂಪ್ರದಾಯವಾಗಿ ಬೆಳೆದುಬಂದಿದೆ. ಈ ವರ್ಷವೂ ನಾನು ಅದೇ ಪದ್ಧತಿಯನ್ನು ಮುಂದುವರಿಸಲಿದ್ದೇನೆ” ಎಂದು ತಿಳಿಸಿದ್ದಾರೆ.
https://x.com/narendramodi/status/2119014258138923120?a=Wvsr7Bxcqod-DMKVBdQ&s=20
ಉಪರಾಷ್ಟ್ರಪತಿಗಳಿಗೆ ಹಬ್ಬದ ಶುಭ ಕೋರಿದ ಮೋದಿ
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಭೇಟಿಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿಯವರು ಧನ್ ತೇರಸ್ ಹಬ್ಬದ ಸಂದರ್ಭದಲ್ಲೂ ದೇಶವಾಸಿಗಳಿಗೆ ಭಗವಾನ್ ಧನ್ವಂತರಿಯ ಕೃಪೆ ಸದಾ ಇರಲಿ ಎಂದು ಪ್ರಾರ್ಥಿಸಿ ಶುಭ ಕೋರಿದ್ದರು.



