ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಅಮಿತ್ ಶಾ ಅವರ ಮಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮನೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ.
ಜಯ್ ಶಾ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ. ಹೌದು, ಜಯ್ ಶಾ ಅವರು ಗಂಡು ಮಗುವಿನ ತಂದೆಯಾಗಿದ್ದಾರೆ. ಈಗಾಗಲೇ ಜಯ್ ಶಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಅತ್ತ ಐಪಿಎಲ್ ಮೆಗಾ ಹರಾಜಿನಲ್ಲಿ ಕಾರ್ಯದರ್ಶಿ ಜಯ್ ಶಾ ಮತ್ತು ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎಲ್ಲಾ ಅಧಿಕಾರಿಗಳು ಜೆಡ್ಡಾದಲ್ಲಿ ಹಾಜರಿದ್ದಾರೆ. ಮೆಗಾ ಹರಾಜಿನ ಸಂದರ್ಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ.