May 25, 2026
Monday, May 25, 2026
spot_img

ರಾಷ್ಟ್ರಪತಿ ಭವನದಲ್ಲಿ ಸಾಧಕರಿಗೆ ಸನ್ಮಾನದ ಸಂಭ್ರಮ: ‘ಪದ್ಮ’ ಪ್ರಶಸ್ತಿಯಿಂದ ಕಂಗೊಳಿಸಿದ 66 ಗಣ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಭವ್ಯ ಸಮಾರಂಭದಲ್ಲಿ 2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಗಣ್ಯರಿಗೆ ಪ್ರದಾನ ಮಾಡಿದರು.

ಸಿನಿಮಾ, ಕ್ರೀಡೆ, ಕಲೆ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವಗಳಿಂದ ಸನ್ಮಾನಿಸಲಾಯಿತು.

ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದ್ದು, ಸಮಾರಂಭದಲ್ಲಿ ನಟಿ ಹೇಮಾ ಮಾಲಿನಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಕ್ಷಣ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯಿತು.

ಹರ್ಮನ್‌ಪ್ರೀತ್ ಕೌರ್‌ಗೆ ಪದ್ಮಶ್ರೀ

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ನೀಡಿದ ಸಾಧನೆಗೆ ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ದೊಡ್ಡ ಮಾನ್ಯತೆ ಸಿಕ್ಕಂತಾಗಿದೆ.

ಇದನ್ನೂ ಓದಿ:

ಕಲೆ-ಸಾಹಿತ್ಯ ಕ್ಷೇತ್ರಕ್ಕೂ ಗೌರವ

ಖ್ಯಾತ ಪಿಟೀಲು ವಾದಕಿ ಎನ್. ರಾಜಮ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ಯಾಂಕರ್ ಉದಯ್ ಕೋಟಕ್ ಹಾಗೂ ಮಾಜಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಪದ್ಮಭೂಷಣ ನೀಡಿ ಸನ್ಮಾನಿಸಲಾಯಿತು.

ಇನ್ನೂ ಬಾಕಿ ಉಳಿದ ಪ್ರಶಸ್ತಿ ಪ್ರದಾನ

ಈ ಬಾರಿ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಮೊದಲ ಹಂತದಲ್ಲಿ 66 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಉಳಿದವರಿಗೆ ಮುಂದಿನ ಸಮಾರಂಭದಲ್ಲಿ ಗೌರವ ಸಲ್ಲಿಸಲಾಗುತ್ತದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !