ಕ್ರಿಕೆಟರ್​​ ಕೆ.ಎಲ್​ ರಾಹುಲ್ ಮನೆಯಲ್ಲಿ ಸಂಭ್ರಮ: ಹೆಣ್ಣು ಮಗುವಿಗೆ ಜನ್ಮ ನೀಡಿದ ಅಥಿಯಾ ಶೆಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟರ್​​ ಕೆ.ಎಲ್​ ರಾಹುಲ್​ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ದಂಪತಿ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ.

ಕೆ.ಎಲ್​ ರಾಹುಲ್​ ಟ್ವೀಟ್​ ಮಾಡಿ ಈ ಗುಡ್​ನ್ಯೂಸ್​ ಹಂಚಿಕೊಂಡಿದ್ದು, ನಮಗೆ ಹೆಣ್ಣು ಮಗು ಆಗಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

ವಾಸ್ತವವಾಗಿ ರಾಹುಲ್ ಐಪಿಎಲ್​ಗಾಗಿ ಕೆಲವು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದ್ದರು. ಆದರೆ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ರಾಹುಲ್ ಭಾನುವಾರವಷ್ಟೇ ಡೆಲ್ಲಿ ತಂಡವನ್ನು ತೊರೆದು ಮನೆಗೆ ವಾಪಸ್ಸಾಗಿದ್ದರು. ಇದೀಗ ಈ ದಂಪತಿಗಳ ಮನೆಗೆ ಮಹಾಲಕ್ಷ್ಮೀಯ ಆಗಮನವಾಗಿದೆ ಎಂಬ ಸುದ್ದಿ ಹೊರಬಿದ್ದಿದೆ.

https://x.com/klrahul/status/1904187089270554819?ref_src=twsrc%5Etfw%7Ctwcamp%5Etweetembed%7Ctwterm%5E1904187089270554819%7Ctwgr%5E21cdcfc45b56d8a1e840f37af85d81c7961f9b50%7Ctwcon%5Es1_&ref_url=https%3A%2F%2Fnewsfirstlive.com%2Fkl-rahul-and-athiya-shetty-blessed-with-baby-girl%2F

ಎರಡು ವರ್ಷಗಳ ಹಿಂದೆ 2023 ಜನವರಿ 23ನೇ ತಾರೀಕಿನಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಜೊತೆ ಅಥಿಯಾ ಅದ್ಧೂರಿಯಾಗಿ ಮದುವೆಯಾದರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!