ಹೊಸದಿಗಂತ ವರದಿ, ಕಲಬುರಗಿ:
ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎಸಿಸಿ ಸಿಮೆಂಟ್ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಕೊರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಅದಾನಿ ಗ್ರೂಪ್ ಮಾಲಿಕತ್ವದ ಎಸಿಸಿ ಸಿಮೆಂಟ್ ಕಾರ್ಖಾನೆಯ ಆಡಳಿತ ಮಂಡಳಿಯ ಸದಸ್ಯರ ಕಿರುಕುಳಕ್ಕೆ ಬೇಸತ್ತು ಡೆಪ್ಯೂಟಿ ಮ್ಯಾನೇಜರ್ ಆಗಿರುವ ರಮೇಶ್ ಪವಾರ್ (೪೭) ತಮ್ಮ ಎಸಿಸಿ ಕಾಲೋನಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ರಮೇಶ್ ಪವಾರ್ ಅವರು ಕಾರ್ಖಾನೆಯ ಹಿರಿಯ ಅಧಿಕಾರಿಗಳ ಮೇಲೆ ಆರೋಪ ಮಾಡಿರುವ ವಿಡಿಯೋ ಮಾಡಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೃತ ರಮೇಶ್ ಪವಾರ್ ಚಿತ್ತಾಪುರ ತಾಲೂಕಿನ ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಅಳಿಯ ಎಂದು ತಿಳಿದುಬಂದಿದೆ.
ವಾಡಿ ಪೋಲಿಸ್ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.