Wednesday, August 17, 2022

Latest Posts

ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಸಿಮೆಂಟ್ ಲಾರಿ

ಹೊಸದಿಗಂತ ವರದಿ ಯಲ್ಲಾಪುರ:
ಯಲ್ಲಾಪುರ ತಾಲೂಕಿನರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟ ದಲ್ಲಿ ಸಿಮೆಂಟ್ ತುಂಬಿದ ಲಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ.

ಲಾರಿ ಕೊಪ್ಪಳದಿಂದ ಅಂಕೋಲಾ ಕಡೆಗೆ ತೆರಳು ತ್ತಿತ್ತು. ಆಕಸ್ಮಿಕ ವಾಗಿ ಟೈಯರ್‌ಗೆ ಹೊತ್ತಿಕೊಂಡ ಬೆಂಕಿ ಸಂಪೂರ್ಣ ಲಾರಿಗೆ ಆವರಿಸಿ ಸುಟ್ಟು ಕರಕಲಾಗಿದೆ.

ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಗೆ ಯಾವುದೇ ಪ್ರಾಣಾಪಾಯವಾಗಿಲ್ಲ.ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದ್ದಾರೆ. ಸ್ಥಳಕ್ಕೆಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿ ಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!