April 1, 2026
Wednesday, April 1, 2026
spot_img

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ, ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದ ಬೃಹತ್ ಅಭಿಯಾನವಾದ 2027ರ ಜನಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.

ಕರ್ನಾಟಕದಾದ್ಯಂತ ಮೊದಲ ಹಂತದ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ , ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಏಪ್ರಿಲ್ 1 ರಿಂದ ಏಪ್ರಿಲ್ 15ರವರೆಗೆ ನಾಗರಿಕರು ಹೊಸದಾಗಿ ಪರಿಚಯಿಸಲಾದ ‘ಸ್ವಯಂ ಗಣತಿ ಪೋರ್ಟಲ್’ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಈ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಬಹುದು.

ಏಪ್ರಿಲ್ 16 ರಿಂದ ಮೇ 15ರವರೆಗೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಪಟ್ಟಿ ತಯಾರಿಕೆ ಮತ್ತು ವಸತಿ ಗಣತಿ ನಡೆಸಲಿದ್ದಾರೆ. ವ್ಯಾಪ್ತಿ ಮೊದಲ ಹಂತದಲ್ಲಿ ಕರ್ನಾಟಕ ಸೇರಿದಂತೆ ದೆಹಲಿ, ಗೋವಾ, ಮಿಜೋರಾಂ, ಒಡಿಶಾ, ಸಿಕ್ಕಿಂ ರಾಜ್ಯಗಳು ಹಾಗೂ ಅಂಡಮಾನ್-ನಿಕೋಬಾರ್, ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !