spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶತಾಯುಷಿ ಆಟಗಾರ್ತಿ, ಅದ್ಭುತ ಸರ್ದಾರ್ಣಿ ‘ಮನ್ ಕೌರ್’ ಇನ್ನು ನೆನಪು ಮಾತ್ರ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತೀಯ ಟ್ಯ್ರಾಕ್ ಅಂಡ್ ಫೀಲ್ಡ್ ಆಟಗಾರ್ತಿ, ಶತಾಯುಷಿ, ಚಂಡೀಗಡದ ಅದ್ಭುತ ಸರ್ದಾರ್ಣಿ ಎಂದೇ ಖ್ಯಾತರಾಗಿದ್ದ ಮನ್ ಕೌರ್ (105) ಕೊನೆಯುಸಿರೆಳೆದಿದ್ದಾರೆ.
ಪಿತ್ತಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಮಹಾಲಿಯಾ ಶುದ್ಧಿ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಈ ಬಗ್ಗೆ ಪುತ್ರ ಗುರುದೇವ್ ಸಿಂಗ್ ಮಾಹಿತಿ ನೀಡಿದ್ದಾರೆ.
2016 ರಲ್ಲಿ, ಅಮೆರಿಕನ್‌ ಮಾಸ್ಟರ್ಸ್ ಗೇಮ್ಸ್‌ನಲ್ಲಿ ಅತ್ಯಂತ ವೇಗವಾಗಿ ಓಡುವ ಶತಾಯುಷಿಯಾಗಿ ಹೊರಹೊಮ್ಮಿದ್ದರು. 100 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಆವರು ವಿಶ್ವ ದಾಖಲೆಗಳನ್ನು ಹೊಂದಿದ್ದರು. 2017ರಲ್ಲಿ ಆಕ್ಲೆಂಡ್‌ನಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಗೇಮ್ಸ್‌ನಲ್ಲಿ 100 ಮೀಟರ್ ಓಟದಲ್ಲಿ ಗೆಲುವು ಸಾಧಿಸಿದ್ದ ಶತಾಯುಷಿ ಓಟಗಾರ್ತಿ ಮನ್ ಕೌರ್. ಇವರ ಸಾಧನೆಗೆ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ‘ನಾರಿ ಶಕ್ತಿ ಪ್ರಶಸ್ತಿ’ ನೀಡಿ ಗೌರವಿಸಿತ್ತು.
100ನೇ ವಯಸ್ಸಿನಲ್ಲಿಯೂ ಕ್ರೀಡೆಯಲ್ಲಿ ವಿಶ್ವ ದಾಖಲೆಗಳನ್ನು ನಿರ್ಮಿಸಿದ ಮತ್ತು ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕಗಳನ್ನು ಗೆದ್ದಿರುವ ಹಿರಿಯ ಕ್ರೀಡಾಪಟು ಮನ್ ಕೌರ್ ನಿಧನಕ್ಕೆ ನನ್ನ ಸಂತಾಪಗಳು ಎಂದು ಉಪರಾಷ್ಟ್ರಪತಿ ಎಮ್. ವೆಂಕಯ್ಯ ನಾಯ್ಡು ಕಂಬನಿ ಮಿಡಿದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss