ಹನುಮ ಜಯಂತಿ : ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ರಾಜ್ಯಗಳಿಗೆ ಸಲಹೆ ನೀಡಿದ ಕೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಮನವಮಿಯಂದು ದೇಶ ಹಲವೆಡೆ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಹನಮ ಜಯಂತಿಗೆ ಮುನ್ನ ಗೃಹ ಸಚಿವಾಲಯವು ಇಂದು ಕಾನೂನು ಸುವ್ಯವಸ್ಥೆ ಕುರಿತು ಎಲ್ಲಾ ರಾಜ್ಯಗಳಿಗೆ ಸಲಹೆಯನ್ನು ನೀಡಿದೆ.

ರಾಮನವಮಿ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ನಡೆದ ಗಲಭೆಗಳನ್ನು ಗಮನದಲ್ಲಿಟ್ಟುಕೊಂಡು ಈ ಸಲಹೆಗಳನ್ನು ನೀಡಲಾಗಿದೆ. ನಾಳೆ(ಏಪ್ರಿಲ್ 6 ರಂದು) ಹನುಮ ಜಯಂತಿಯನ್ನು ದೇಶದಾದ್ಯಂತ ಆಯೋಜಿಸಲಾಗಿದೆ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು, ಹಬ್ಬವನ್ನು ಶಾಂತಿಯುತವಾಗಿ ಆಚರಿಸುವುದು ಹಾಗೂ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಅಂಶಗಳ ಮೇಲೆ ನಿಗಾ ಇಡುವುದನ್ನು ಖಚಿತಪಡಿಸಿಕೊಳ್ಳಲು ಸರಕಾರಗಳನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!