ಪೀಪಲ್ಸ್ ಆಂಟಿ ಫ್ಯಾಸಿಸ್ಟ್ ಫ್ರಂಟ್ ಸಂಘಟನೆ ನಿಷೇಧಿಸಿದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಉಗ್ರ ಸಂಘಟನೆ ಜೈಶ್ ಎ ಮೊಹಮದ್ ಜತೆ ಗುರುತಿಸಿಕೊಂಡಿರುವ ಪೀಪಲ್ಸ್ ಆಂಟಿ ಫ್ಯಾಸಿಸ್ಟ್ ಫ್ರಂಟ್‌ನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ಈ ಹಿಂದೆ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ನಿಷೇಧಿಸಿದ್ದು, ಇದೀಗ ಪಿಎಎಫ್‌ಎಫ್ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ಪಿಎಎಫ್‌ಎಫ್ ಸಂಘಟನೆಯಿಂದ ಜಮ್ಮು ಕಾಶ್ಮೀರದ ಹೊರಗಿನ ರಾಜ್ಯಗಳ ಜನರಿಗೆ, ಕಾಶ್ಮೀರಿ ಪಂಡಿತರಿಗೆ, ಭದ್ರತಾ ಪಡೆಗಳಿಗೆ ಬೆದರಿಕೆ ಹಾಕುತ್ತಿರುವ ಸಂಘಟನೆಯನ್ನು ಸದೆಬಡೆಯಲು ಸರ್ಕಾರ ನಿರ್ಧರಿಸಿದೆ.

ಜೈಶ್ ಸಂಘಟನೆ ಜತೆ ಪಿಎಎಫ್‌ಎಫ್ ಸಂಘಟನೆ ತಳುಕು ಹಾಕಿಕೊಂಡಿದ್ದು, ಜಮ್ಮು ಕಾಶ್ಮೀರದಲ್ಲಿ ಅಶಾಂತಿ ಉಂಟು ಮಾಡುತ್ತಿದೆ. ರಕ್ತಕ್ರಾಂತಿ ನಡೆಸುತ್ತಿರುವ ಆರೋಪದ ಮೇಲೆ ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!