ಕೇಂದ್ರ ಸಚಿವರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಜವಳಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಇಲಾಖೆ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು.

ಈ ಸಂದರ್ಭ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.
ಅಷ್ಟೇ ಅಲ್ಲದೇ ಸಿಎಂ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ, ಇಲಾಖೆ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!