ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ “ನೈಜ ಸಮಸ್ಯೆಗಳ” ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ಆರೋಪಿಸಿದ್ದಾರೆ.
“ಸರ್ಕಾರ ನೈಜ ವಿಷಯಗಳ ಬಗ್ಗೆ ಚರ್ಚಿಸುವುದಿಲ್ಲ ಅಥವಾ ಉತ್ತರಗಳನ್ನು ನೀಡುವುದಿಲ್ಲ. ಕಳೆದ ಅಧಿವೇಶನ ಕೂಡ ಹೀಗೆ ಆಗಿದೆ, ಯಾವುದೇ ಚರ್ಚೆ ನಡೆಯಲಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿಗೆ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಬಂದಾಗ ಸುದ್ದಿಗಾರರಿಗೆ ತಿಳಿಸಿದ್ದಾರೆ.