ಹೊಸದಿಗಂತ ಡಿಜಿಟಲ್ ಡೆಸ್ಕ್:
ಇ-ಹರಾಜಿನಲ್ಲಿ ಭಾಗವಹಿಸದೆ ಭಾರತೀಯ ಆಹಾರ ನಿಗಮದಿಂದ ನೇರವಾಗಿ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ರಾಜ್ಯಗಳು ಇ-ಹರಾಜಿನಲ್ಲಿ ಭಾಗವಹಿಸದೆಯೇ ಭಾರತೀಯ ಆಹಾರ ನಿಗಮದಿಂದ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಅಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ 2,800 ರೂ.ಗೆ ಖರೀದಿಸಬಹುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹೊಸ ಖರೀದಿ ಅವಧಿಗೆ ಮುನ್ನ ಎಫ್‌ಸಿಐ ಗೋಡೌನ್‌ಗಳಲ್ಲಿರುವ ಬೃಹತ್ ಹೆಚ್ಚುವರಿ ದಾಸ್ತಾನುಗಳನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.