Tuesday, June 6, 2023

Latest Posts

ದೇಶದಲ್ಲಿ ಮತ್ತೆ ಕೋವಿಡ್‌ ಹೆಚ್ಚಳ: ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
ನಿನ್ನೆ ದೇಶದಲ್ಲಿ 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಮುಂದಿನ ದಿನಗಳಲ್ಲಿ ಒಮಿಕ್ರಾನ್‌ ಸೋಂಕು ಕೂಡ ಹೆಚ್ಚಾಗುವ ಭೀತಿ ಇದೆ. ಜನರು ಕಡಿಮೆ ಅವಧಿಯಲ್ಲಿ ಸೌಮ್ಯ ಲಕ್ಷಣಗಳೊಂದಿಗೆ ಅಥವಾ ತೀವ್ರ ಆರೋಗ್ಯ ಸಮಸ್ಯೆಯೊಂದಿಗೆ ಬಳಲುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯ ಎಂದಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಮಾತನಾಡಿದ್ದು, ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ತುರ್ತಾಗಿ ಹೆಚ್ಚಿಸಬೇಕಿದೆ. ಆಸ್ಪತ್ರೆಗಳ ಶೀಘ್ರ ನಿರ್ಮಾಣಕ್ಕೆ ಡಿಆರ್ ಡಿಒ, ಸಿಎಸ್‌ ಐಆರ್‌ ಅಥವಾ ಎಂಜಿಒಗಳ ನೆರವು ಪಡೆಯಬಹುದು ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 1 ಲಕ್ಷ ಗಡಿದಾಟ್ಟಿದ್ದು, ಮಹಾರಾಷ್ಟ್ರ ಒಂದರಲ್ಲೇ 9,170 ಸೋಂಕಿತರು ಪತ್ತೆಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!