ಕೇಂದ್ರದಿಂದ ಮೂಗಿಗೆ ತುಪ್ಪ ಸವರುವ ಕೆಲಸ: ಬಜೆಟ್ ಕುರಿತು ಕುಮಾರಸ್ವಾಮಿ ವ್ಯಂಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ.ಬಜೆಟ್ ಘೋಷಣೆ ಆದ್ರೂ ಹಣಕಾಸು ಬಿಡುಗಡೆ ಏಪ್ರಿಲ್ ಮೇಲೆ ಪ್ರಾರಂಭವಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್. ರಾಜ್ಯದಲ್ಲಿ ಚುನಾವಣೆ ಕೆಲವೇ ತಿಂಗಳು ಇದೆ. ಬಜೆಟ್ ನಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಜಾರಿ ಆಗಬೇಕಲ್ಲ ಎಂದು ವ್ಯಂಗ್ಯವಾಡಿದರು.

ಕೇಂದ್ರದ ಘೋಷಣೆ, ಘೋಷಣೆ ಆಗಿಯೇ ಉಳಿಯತ್ತೆ. ಕೇಂದ್ರದ ಹಣ ಬಿಡುಗಡೆ ಆಗುವುದರ ಒಳಗೆ ಚುನಾವಣಾ ನೀತಿ ಸಂಹಿತೆ ಬರುತ್ತೆ. ಜನರನ್ನು ತಾತ್ಕಾಲಿಕವಾಗಿ ಮೆಚ್ಚಿಸಲು ಘೋಷಣೆ ಇಡಬಹುದು ಎಂದು ತಿಳಿಸಿದರು.

ಬಿಜೆಪಿ (BJP) ತಿರಸ್ಕಾರ ಮಾಡಿದ್ರೆ ಕರ್ನಾಟಕಕ್ಕೆ ಏನ್ ಕೊಡ್ತಾರೆ ಅನ್ನೋದು ಗೊತ್ತಿಲ್ಲ. ಚುನಾವಣೆ ಆದ್ಮೇಲೆ ಜನ ಮರೆತು ಹೋಗುತ್ತಾರೆ. ಕೇಂದ್ರದ ಬಜೆಟ್ ಮೇಲೆ ನನಗೆ ನಂಬಿಕೆ ಇಲ್ಲ, ಹೆಚ್ಚಿನ ಮಹತ್ವ ಕೊಡಲ್ಲ. ರಾಷ್ಟ್ರೀಯ ಯೋಜನೆಗೆ ನಾವು ಅರ್ಜಿ ಕೊಟ್ಟಿದ್ದೆವು. ಕೇಂದ್ರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ನುಡಿದರು.

ಕರ್ನಾಟಕ ಬರಪೀಡಿತ ತ ಅನ್ನೋದು ಗೊತ್ತಾಗಿರೋದು ಖುಷಿ ವಿಚಾರ. ಕರ್ನಾಟಕ ಬರಪೀಡಿತ ಅಂತ ಘೋಷಣೆ ಮಾಡಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!