ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರದ ಕರ್ತವ್ಯ: ಡಾ‌.ಜಿ.ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವುದು ಕೇಂದ್ರದ ಕರ್ತವ್ಯ. ಆದರೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಯೊಂದು ಹೀಗೆ ಆಗಬೇಕು ಎನ್ನುತ್ತಿದ್ದಾರೆ ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ವರ್ ಕಿಡಿಕಾರಿದರು.

ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೇಂದ್ರ ಸರ್ಕಾರ ಸಹಕರಿಸಬೇಕು. ಸುಮ್ಮನೆ ಕಾಮೆಂಟ್ ಮಾಡುವುದರಲ್ಲಿ ಅರ್ಥವಿಲ್ಲ. ಪ್ರಜ್ವಲ್ ಅವರ ಪಾಸ್‌ಪೋರ್ಟ್ ರದ್ದುಪಡಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸಹಾಯ ಮತ್ತು ಸಹಕಾರ ನೀಡಬೇಕು.

ಇದು ಸುಲಭದ ಪ್ರಶ್ನೆಯಲ್ಲ. ಇದು ಕಾನೂನು ವಿಷಯವಾಗಿದೆ. ಅಂತಹ ಸಂದರ್ಭಗಳಲ್ಲಿ, ಕಾನೂನು ಬೆಂಬಲವು ಕೇಂದ್ರದ ಜವಾಬ್ದಾರಿಯಾಗಿದೆ. ದಯವಿಟ್ಟು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿ. ಅರೆಸ್ಟ್ ವಾರಂಟ್ ಜಾರಿಯಾಗಿರೋದು ಕೋರ್ಟ್‌ನಿಂದ. ಇದನ್ನ ಈಗಾಗಲೇ ಎಸ್ಐಟಿಯವರು ಕೇಂದ್ರಕ್ಕೆ ತಿಳಿಸಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!