ಪ್ಲಾಸ್ಟಿಕ್ ಪಾರ್ಕ್‌ಗೆ ಕೇಂದ್ರದ ಅಂತಿಮ ಒಪ್ಪಿಗೆ: ನಳಿನ್

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯ ಬಹುನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯು ಅಂತಿಮ ಒಪ್ಪಿಗೆ ನೀಡಿ ಕೇಂದ್ರದ ಶೇ. ೫೦ ಪಾಲು ಹಣ ಬಿಡುಗಡೆಗೆ ಅಂತಿಮ ಆದೇಶ ನೀಡಿದೆ. ಕೆ.ಐ.ಎ.ಡಿ.ಬಿ. ಉಳಿಕೆ ಶೇ.50 ಪಾಲು ಹೂಡಿಕೆಯೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ತಿಳಿಸಿದ್ದಾರೆ.
ಈ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠದ ಬಳಿ ಸುಮಾರು 104 ಎಕರೆ ಕೆ.ಐ.ಎ.ಡಿ.ಬಿ. ಪ್ರದೇಶದಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಈ ಯೋಜನೆ ಕಾರ್ಯರೂಪಕ್ಕೆ ಬರಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ರಾಸಾಯನಿಕ ಖಾತೆಯ ಸಚಿವ ಭಗವಂತ್ ಖೂಬಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರಿಗೆ ನಳಿನ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಸಹಕರಿಸಿದ ಕೇಂದ್ರ ರಾಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯ ಮಾಜಿ ಸಚಿವರಾದ ದಿ. ಅನಂತಕುಮಾರ್, ಸದಾನಂದ ಗೌಡ, ಮಾನ್‌ಸುಖ್ ಮಾಂಡವೀಯ ಅವರಿಗೂ ನಳಿನ್ ಕುಮಾರ್ ಕಟೀಲ್ ಅವರು ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!