RECRUITMENT | ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 250 ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 250 ಮುಖ್ಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 11,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪದವಿ ವಿದ್ಯಾರ್ಹತೆಯುಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ನೇಮಕಾತಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 63,840/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 850/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 11,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!