February 18, 2026
Wednesday, February 18, 2026
spot_img

ಅಭಿವೃದ್ಧಿಗೆ ಪೂರಕವಾದ ಕೇಂದ್ರ ಬಜೆಟ್: ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಮೆಚ್ಚುಗೆ

ಹೊಸದಿಗಂತ ವರದಿ ಚಿತ್ರದುರ್ಗ:

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ವಿಶೇಷವಾಗಿ ಕರ್ನಾಟಕದ ಕರಾವಳಿಯಲ್ಲಿ ಚಾರಣದ ಯೋಜನೆ ರೂಪಿಸಿರುವುದನ್ನು ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸ್ವಾಗತಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ಸೇರಿದಂತೆ ಒಟ್ಟಾರೆ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ. ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರವಾಸೋದ್ಯಮ ಹತ್ತು ಹಲವು ಯೋಜನೆಗಳನ್ನು ಘೋಷಿಸಿರುವುದು ಭವಿಷ್ಯದ ಭಾರತದ ಕನಸಾಗಿದೆ ಎಂದಿದ್ದಾರೆ.

ಕರ್ನಾಟಕದ ಕರಾವಳಿ ಚಾರಣ ಯೋಜನೆಯಿಂದ ಪಶ್ಚಿಮ ಘಟ್ಟದ ಉಳಿವಿನ ಬಗ್ಗೆ ಚರ್ಚೆಗಳು ನಡೆಯಿತ್ತಿರುವ ಈ ಸಂದರ್ಭದಲ್ಲಿ ಅಧ್ಯಯನಕ್ಕೆ ಪರಿಸರ ಆಸಕ್ತರು, ಯುವ ಸಂಶೋಧಕರಿಗೆ ಪೂರಕವಾಗಿದೆ. ಇಂತಹ ಅಭಿವೃದ್ಧಿಶೀಲ ಹಾಗೂ 9ನೇ ದಾಖಲೆಯ ಬಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇವೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !