ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗೆ (ಸಿಇಒ) ನಿರ್ದೇಶನ ನೀಡಿದೆ.
ಡಿ.ಕೆ.ಸುರೇಶ್ ಅವರು ಉಚಿತ ಆಹಾರ ಪದಾರ್ಥಗಳನ್ನು ವಿತರಿಸಲು ನಿರ್ಧರಿಸುತ್ತಿದ್ದು, ಹೀಗಾಗಿ ರಾಜ್ಯ ಚುನಾವಣಾ ಯಂತ್ರವು ತ್ವರಿತ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಲ್ಲಿಸಿದ್ದ ದೂರಿಗೆ ಭಾರತದ ಚುನಾವಣಾ ಆಯೋಗ (ಇಸಿಐ) ಸ್ಪಂದಿಸಿದ್ದು, ಈ ಕುರಿತು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗೆ (ಸಿಇಒ) ನಿರ್ದೇಶನ ನೀಡಿದೆ.
ರಾಜ್ಯ ಸಿಇಒಗೆ ಬರೆದ ಪತ್ರದಲ್ಲಿ, ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವಂತೆ ಕೇಳಿದೆ ಮತ್ತು ಆದಷ್ಟು ಬೇಗ ವರದಿಯನ್ನು ಕೋರಿದೆ.
ಮಾಜಿ ಪ್ರಧಾನಿ ದೇವೇಗೌಡರು ,ಚುನಾವಣಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಮಾರ್ಚ್ 21 ರಂದು ಈ ಪತ್ರವನ್ನು ಕಳುಹಿಸಲಾಗಿದೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಭ್ರಷ್ಟಾಚಾರ ಚಟುವಟಿಕೆಗಳನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳಲು ರಾಜ್ಯ ಚುನಾವಣಾ ಯಂತ್ರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.