ಹೊಸದಿಗಂತ, ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯ ಸಭೆ ಇಂದು ದಿಲ್ಲಿಯಲ್ಲಿ ಆರಂಭವಾಗಿದ್ದು, ಸಭೆಯ ಬೆನ್ನಲೇ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಹೊರ ಬೀಳುವ ಸಾಧ್ಯತೆ ಹೆಚ್ಚಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದಿಲ್ಲಿಗೆ ಭೇಟಿ ನೀಡಿದ್ದು, ಸುರ್ಜೇವಾಲ ಅವರೊಂದಿಗೆ ಚರ್ಚೆ ಮಾಡಿ ಹೈಕಮಾಂಡ್ ಮುಂದೆ ರಾಜ್ಯದ ಆಕಾಂಕ್ಷಿಗಳ ಪಟ್ಟಿಯನ್ನು ಮಂಡಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಭೆಯಲ್ಲಿ ಸಮಾಲೋಚನೆ ನಡೆಸಿದ ಬಳಿಕ 18ರಿಂದ 20 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹೊರಬೀಳುವ ನಿರೀಕ್ಷೆಯಿದೆ.