ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಮಹೋತ್ಸವದ ವೇಳೆ ಏರ್ ಶೋ ನಡೆಸಲು ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದೆ.
ನಾಡಹಬ್ಬ ದಸರಾ ಅಕ್ಟೋಬರ್ 15 ರಂದು ಉದ್ಘಾಟನೆಯಾಗಲಿದ್ದು, ಅಕ್ಟೋಬರ್ 24 ರಂದು ಜಂಬೂ ಸವಾರಿಯೊಂದಿಗೆ ಮುಕ್ತಾಯಗೊಳ್ಳಲಿದೆ. ದಸರಾ ಮಹೋತ್ಸವದ ವೇಳೆ ವೈಮಾನಿಕ ಪ್ರದರ್ಶನ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ವಾಯುಪಡೆಯ ಅಧಿಕಾರಿಗಳೊಂದಿಗೆ ಬನ್ನಿ ಮಂಟಪ ಮೈದಾನಕ್ಕೆ ಭೇಟಿ ನೀಡಿ ಪ್ರದರ್ಶನದ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ.