BIG BREAKING NEWS | PFI ಯನ್ನು 5 ವಷ೯ಗಳ ಕಾಲ ನಿಷೇಧಿಸಿ ಕೇಂದ್ರ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ 8 ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು  ತಕ್ಷಣವೇ ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರಕಾರ ಅಧಿಸೂಚನೆ‌ ಹೊರಡಿಸಿದೆ. ಯುಎಪಿಎ ಕಾಯ್ದೆಯಡಿ 5 ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯನ್ನು ದೇಶಾದ್ಯಂತ ಬ್ಯಾನ್ ಮಾಡಿದೆ.

ಇವುಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ, ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ. ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಚಟುವಟಿಕೆಯಲ್ಲಿ ತೊಡಗಿವೆ ಎಂಬ ಆರೋಪವಿದ್ದು. ಇದೀಗ ಕೇಂದ್ರ‌ ಸರಕಾರ ನಿಷೇಧ ಹೇರಿದೆ.

ಹಲವು ದಿನಗಳಿಂದ ಸಂಘಟನೆಯ ವಿರುದ್ಧ ರಾಜ್ಯಗಳಲ್ಲಿ ಎನ್‌ಐಎ ದಾಳಿ ನಡೆಸಿದ್ದು, ಪಿಎಫ್‌ಐ ಜತೆ ಸಂಬಂಧ ಹೊಂದಿದ 200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಇದಾದ ನಂತರ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!