ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ.ಕಲೆ, ಸಮಾಜ ಸೇವೆ, ಸಾಹಿತ್ಯ, ಶಿಕ್ಷಣ, ಆಡಳಿತ, ವಿಜ್ಞಾನ, ಕ್ರೀಡೆ, ಉದ್ಯಮ, ವೈದ್ಯಕೀಯ ಕ್ಷೇತ್ರ ಹೀಗೆ ಹಲವು ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿರುವ ವ್ಯಕ್ತಿಗೆ ಈ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ನೀಡುತ್ತಾ ಬಂದಿದೆ.
ಕಲಾ ವಿಭಾಗದಲ್ಲಿ ಈ ಬಾರಿ ಹಲವು ಸಿನಿಮಾ ನಟ, ನಟಿಯರಿಗೆ ಪದ್ಮ ಪ್ರಶಸ್ತಿಗಳು ದೊರಕಿವೆ.
ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಧರ್ಮೇಂದ್ರ ಅವರು 2025ರ ನವೆಂಬರ್ನಲ್ಲಿ ನಿಧನ ಹೊಂದಿದರು.
ತಮಿಳುನಾಡು ಮೂಲಕ ವೈಯಲಿನ್ ವಾದಕಿ ಎನ್ ರಾಜನ್ ಅವರಿಗೂ ಸಹ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಪದ್ಮ ವಿಭೂಷಣ ದೊರಕಿರುವ ಐವರಲ್ಲಿ ಕಲಾ ಕ್ಷೇತ್ರಕ್ಕೆ ಎರಡು ಪ್ರಶಸ್ತಿ ಬಂದಿರುವುದು ವಿಶೇಷ.
ಒಟ್ಟು 13 ಪದ್ಮ ಭೂಷಣ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅವುಗಳಲ್ಲಿ ನಾಲ್ಕು ಕಲಾ ವಿಭಾಗಕ್ಕೆ ನೀಡಲಾಗಿದೆ. ಹಿಂದಿ, ಕನ್ನಡ ಸೇರಿದಂತೆ ದೇಶದ ಹಲವಾರು ಭಾಷೆಗಳಲ್ಲಿ ಹಾಡಿರುವ ಗಾಯಕಿ ಅಲ್ಕಾ ಯಾಗ್ನಿಕ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ದೇಶದ ಅತ್ಯುತ್ತಮ ನಟ ಮತ್ತು ಅಪರೂಪದ ಸೂಪರ್ ಸ್ಟಾರ್ ಆಗಿರುವ ಮಲಯಾಳಂನ ಖ್ಯಾತ ನಟ ಮಮ್ಮುಟಿ ಅವರಿಗೆ ಪದ್ಮ ಭೂಷಣ ಗೌರವ ಧಕ್ಕಿದೆ. ಭಾರತದ ಜಾಹೀರಾತು ಕ್ಷೇತ್ರದ ದಿಗ್ಗಜ ಪಿಯೂಷ್ ಪಾಂಡೆ ಅವರಿಗೆ ಮರಣೋತ್ತರವಾಗಿ ಪದ್ಮ ಭೂಷಣ ಗೌರವ ಧಕ್ಕಿದೆ. ಇನ್ನು ಕರ್ನಾಟಕದ ಶತಾವಧಾನಿ ಗಣೇಶ್ ಅವರಿಗೆ ಕಲಾ ಕ್ಷೇತ್ರದ ಸಾಧನೆಗಾಗಿ ಪದ್ಮ ಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ತೆಲುಗಿನ ಹಿರಿಯ ನಟ ರಾಜೇಂದ್ರ ಪ್ರಸಾದ್ ಹಾಗೂ ಮಾಗಂಟಿ ಮುರಳಿ ಮೋಹನ್ ಸೇರಿದಂತೆ ಇನ್ನೂ ಕೆಲವು ಕಲಾವಿದರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಕಳೆದ ವರ್ಷ ಹಠಾತ್ತಾಗಿ ನಿಧನ ಹೊಂದಿದ ಬಾಲಿವುಡ್ನ ಖ್ಯಾತ ನಟ, ನಿರ್ದೇಶಕ ಸತೀಶ್ ಶಾ ಅವರಿಗೂ ಸಹ ಮರೋಣತ್ತರ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.




