327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್‌ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾರ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್‌ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಹೇಳಿದ್ದಾರೆ.

ಈ ಬೈಪಾಸ್‌ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ ಮತ್ತು DPR ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ ಅನುಮೋದನೆ ನೀಡಿದ್ದು. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ವಿಸ್ತೀರ್ಣದ ಬೈಪಾಸ್‌ ರಸ್ತೆ ನಿರ್ಮಾಣವಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!